- ಅಥಣಿ: ತಾಲ್ಲೂಕಿನ ಹೊಸಟ್ಟಿಯ ಸಿದ್ದೇಶ್ವರ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ, ಶಾಸಕ
ಲಕ್ಷ್ಮಣ ಸವದಿ ಬೆಂಬಲಿತ ಶಿವಾನಂದ ನಾಯಿಕ ಮತ್ತು ಉಪಾಧ್ಯಕ್ಷೆಯಾಗಿ ಭಾರತಿ ಹಲ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಪ್ರಸಕ್ತ ವರ್ಷ 30 ಸಹಕಾರ ಸಂಘಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಗಳಲ್ಲಿ ಎಲ್ಲ ಸಹಕಾರ ಸಂಘಗಳಲ್ಲಿ ನಮ್ಮ ಬೆಂಬಲಿಗರೇ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು .
ನೂತನ ಅಧ್ಯಕ್ಷ ಶಿವಾನಂದ ನಾಯಿಕ ಮಾತನಾಡಿ, ಶಾಸಕ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಸೊಸೈಟಿ ಮುನ್ನಡೆಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ. ಪಾರದರ್ಶಕ ಆಡಳಿತ ನೀಡುತ್ತೇವೆ ಎಂದು ಹೇಳಿದರು.