ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘವು ಇದೇ ಮೊದಲ ಬಾರಿಗೆ ಮಾಧ್ಯಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಲ್ವರು ಸಾಧಕಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. 2024ನೇ ಸಾಲಿನ ಪ್ರಶಸ್ತಿಗಾಗಿ ನಾಲ್ವರನ್ನು ಆಯ್ಕೆ ಮಾಡಿದೆ. ಪತ್ರಕರ್ತೆಯರಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ದೂರದರ್ಶನದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಪತ್ರಕರ್ತೆ ಗಾಯತ್ರಿ ಚಂದ್ರಶೇಖರ್ ಹಾಗೂ ಪತ್ರಕರ್ತೆ ಅನಿತಾ ಅವರನ್ನು ಆಯ್ಕೆ ಮಾಡಲಾಗಿದೆ. ಮಹಿಳಾ ಸಾಧಕರು, ವಾರ್ಷಿಕ ಪ್ರಶಸ್ತಿಗೆ ಇಸ್ರೋ ಚಂದ್ರಯಾನ-3 ಡೆಪ್ಯೂಟಿ ಪ್ರಾಜೆಕ್ಟ್ ಡೈರೆಕ್ಟರ್ ಎಂ.ವಿ. ರೂಪಾ ಹಾಗೂ ಬೆಂಗಳೂರು ನಗರ ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಸಾಮಾಜಿಕ ಕಾರ್ಯಕರ್ತೆ ಕಾತ್ಯಾಯಿನಿ ಚಾಮರಾಜ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಏ.3ರಂದು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದ (ಬೆಂಗಳೂರು ನಗರ ವಿವಿ) ಸೆಮಿನಾ‌ರ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.