Join The Telegram | Join The WhatsApp |
ಬೆಂಗಳೂರು-
ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕಿದೆ. 9ನೇ ಆರೋಪಿ ಸೈಯದ್ ನದೀಮ್ಗೆ ಎನ್‌ಐಎ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಕೊಲೆ ಮಾಡಿದ ಆರೋಪಿಗೆ ಆಶ್ರಯ ನೀಡಿದ ಆರೋಪದಡಿಯಲ್ಲಿ ಸೈಯದ್ ನದೀಮ್ನನ್ನು ಬಂಧಿಸಲಾಗಿತ್ತು.
ಆರೋಪಿಯ ಪರ ವಕೀಲರ ವಾದ ಆಲಿಸಿದ ಎನ್‌ಐಎ ವಿಶೇಷ ಕೋರ್ಟ್ ನ್ಯಾ.ಸಿ.ಎಂ.ಗಂಗಾಧರ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದರು. ಫೆಬ್ರವರಿ 20ರಂದು ರಾತ್ರಿ 9 ಗಂಟೆ ಸಮಯದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎಗೆ ವಹಿಸಿದ್ದು, ತನಿಖೆ ಮುಂದುವರಿದಿದೆ.
Join The Telegram | Join The WhatsApp |