ಬೆಳಗಾವಿ:
60 ಸಾವಿರ ಲಂಚ ಪಡೆಯುತ್ತಿದ್ದ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರಾಮದುರ್ಗ ತಾಲೂಕು ಚಿಕ್ಕೊಪ್ಪ ಎಸ್‌.ಕೆ. ಗ್ರಾಮದ ವ್ಯಕ್ತಿಯೊಬ್ಬರು ಪಹಣಿ ಪತ್ರ ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಬೆಳಗಾವಿ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು.

ಲೋಕಾಯುಕ್ತ ಎಸ್ಪಿ ಹನುಮಂತರಾಯ, ಡಿವೈಎಸ್‌ಪಿ ಬಿ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ ಪಿಎಸ್‌ಐ ಅನ್ನಪೂರ್ಣ ಹುಲಗೂರ ನೇತೃತ್ವದ ತಂಡ ಎಸ್‌ಡಿಸಿಯವರನ್ನು ವಶಕ್ಕೆ ಪಡೆದುಕೊಂಡರು.