ಬೈಲಹೊಂಗಲ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಏರ್ಪಡಿಸಿದ್ದ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆಯಲ್ಲಿ ಬೈಲಹೊಂಗಲದ ಕೆಆರ್ ಸಿಇಎಸ್ ಎಚ್.ವಿ.ಕೌಜಲಗಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಾಧನೆ ಮಾಡಿದ್ದಾರೆ .

ಪ್ರಥಮ ವರ್ಷದ ಎಲ್ ಎಲ್ ಬಿ ವಿದ್ಯಾರ್ಥಿನಿಯಾಗಿರುವ ಖೈರುನೀಷ್ ಭಾಗಿಜಿಕೊಪ್ಪ ಅವರು ಜಾವೆಲಿನ್ ಥ್ರೋದಲ್ಲಿ 12:61 ಮೀಟರ್ ನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ಸಾಧನೆಗೆ ಮಾಜಿ ಶಾಸಕ ಡಾ.ವಿ.ಐ.ಪಾಟೀಲ ಮತ್ತು ಶಾಸಕ.ಮಹಾಂತೇಶ ಕೌಜಲಗಿ ಮತ್ತು ಕಾನೂನು ಕಾಲೇಜು ಉಪ ಸಮಿತಿ ಸದಸ್ಯರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಮತ್ತು ಪ್ರಾಚಾರ್ಯರು ಸಾಧನೆಗೈದ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.