ಗೋಕಾಕ :
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ್ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಇನ್ನೇನೂ ಲೋಕಸಭೆಯ ಚುನಾವಣೆಯ ಹೊಸ್ತಿನಲ್ಲಿರುವಾಗ ಈ ರಾಜ್ಯಗಳ ಫಲಿತಾಂಶಗಳು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ ಕೇಂದ್ರ ಸರ್ಕಾರದ ಯೋಜನೆಗಳಿಂದ ಮತದಾರರು ಬಿಜೆಪಿಗೆ ಫುಲ್ ಮಾರ್ಕ್ಸ್ ನೀಡಿದ್ದಾರೆ. ಅದಕ್ಕಾಗಿ ಮೂರೂ ರಾಜ್ಯಗಳ ಮತದಾರರು, ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ಮೋದಿಯವರನ್ನು ಮತ್ತೊಂದು ಅವಧಿಗೆ ಪ್ರಧಾನಿಯನ್ನಾಗಿ ಕಣ್ತುಂಬಿ ನೋಡುವ ಅವಕಾಶವು ಪ್ರತಿಯೊಬ್ಬ ಭಾರತೀಯನಿಗೆ ಲಭಿಸಲಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯ ಹವಾ ಮುಂದುವರೆಯಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.