
ಆರ್ಡಿ : ಆರ್ಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ, ಬೆಪ್ಡೆ ಚಂದ್ರಮಕ್ಕಿಯ ಬಾಲಕೃಷ್ಣ ಶೆಟ್ಟಿ ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು.
ಆಡಿ೯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80, 90 ರ ದಶಕದಲ್ಲಿ ಸುದೀರ್ಘ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ
ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯನ್ನು ಕಲಿಸಿ. ಭವಿಷ್ಯ ರೂಪಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಂತ ಶಿಸ್ತುಬದ್ಧ ಬೋಧನ ಕ್ರಮದ ಮೂಲಕ ಅವರು ಪಾಠ ಮಾಡುತ್ತಿದ್ದರು.
ಹಿರಿಯರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಕುಟುಂಬ ವರ್ಗದವರಿಗೆ ಮೃತರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಹಳೆಯ ವಿದ್ಯಾರ್ಥಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.