ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಶಿರಚ್ಛೇದ ಮಾಡುವುದಾಗಿ ವೀಡಿಯೊ ಮೂಲಕ ಬಹಿರಂಗವಾಗಿ ಬೆದರಿಕೆ ಹಾಕಿದ ಬಾಂಗ್ಲಾದೇಶದ ವಲಸಿಗ ಶೇಖ್ ಅತಾಲ್ ಎಂಬಾತನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

ಆತನಿಂದ ಆಯುಧವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಯೋಗಿ ಆದಿತ್ಯನಾಥ ಅವರನ್ನು ಕೊಲ್ಲುವ ಬಗ್ಗೆ ಮಾತನಾಡುತ್ತಿರುವುದು ಮತ್ತು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿರುವುದು ಕಂಡುಬಂದಿದೆ.

 

ಮೂಲತಃ ಬಾಂಗ್ಲಾದೇಶದವನಾದ ಶೇಖ್ ಅತಾಲ್ ನನ್ನು ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. 40 ವರ್ಷದ ಶೇಖ್ ಅತಾಲ್ ಬಳಿ ಪಿಸ್ತೂಲ್, ಕಾರ್ಟ್ರಿಡ್ಜ್ಗಳು, ಆಕ್ಷೇಪಾರ್ಹ ದಾಖಲೆಗಳು ಮತ್ತು ಮೊಬೈಲ್ ಫೋನ್ ಪತ್ತೆಯಾಗಿದೆ, ಇದನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಬೆದರಿಕೆ ಹಾಕಲು ಬಳಸಲಾಗಿದೆ.
ನೋಯ್ಡಾದ ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಐಟಿ ಕಾಯ್ದೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಶೇಖ್ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ ಮನೀಶ್ ಮಿಶ್ರಾ ಹೇಳಿದ್ದಾರೆ.