
ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ತಾಲ್ಲೂಕಿನ ತುಮ್ಮರಗುದ್ದಿ ಗ್ರಾಮದ ಬಾಣಂತಿ ಕೀರ್ತಿ ನೇಸರಗಿ (21) ಮೃತಪಟ್ಟಿದ್ದಾರೆ.
ಮಾರ್ಚ್ 4ರ ಮಧ್ಯಾಹ್ನ 12ಕ್ಕೆ ಶಸ್ತ್ರಚಿಕಿತ್ಸೆ ಮೂಲಕ ಹೆಣ್ಣುಮಗುವಿಗೆ ಜನ್ಮನೀಡಿದ್ದರು. ವಿಪರೀತ ರಕ್ತಸ್ರಾವ ಆಗುತ್ತಿದ್ದರೂ ವೈದ್ಯರು ಅಂದೇ ಜನರಲ್ ವಾರ್ಡ್‌ಗೆ ಸ್ಥಳಾಂತರ ಮಾಡಿದ್ದರು. ತೀವ್ರ ರಕ್ತಸ್ರಾವದಿಂದ ಸಂಜೆ ಹೊತ್ತಿಗೆ ಕೀರ್ತಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತು. ತಕ್ಷಣ ವೈದ್ಯರು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಿದರು. ಆದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದರು.
ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣವೆಂದು ಸಂಬಂಧಿಕರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.