ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗೋಕಾಕ ತಾಲೂಕು ಕುಂದರಗಿ ಗ್ರಾಮದ ಪೂಜಾ ಎಂಬುವವರು ಡಿಸೆಂಬರ್ 24ರಂದು ಹೆರಿಗೆಗೆ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಂತರ ಅವರು ಮೃತಪಟ್ಟಿರುವುದು ಈಗ ಅವರ ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ. ಪೂಜಾ ಅವರಿಗೆ ಹೆರಿಗೆ ನಂತರ ಫಿಟ್ಸ್ ಬಂದು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದಿರುವ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.