Join The Telegram | Join The WhatsApp |
ಬೆಳಗಾವಿ :
ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ನಾಳೆ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅವರು ಆಯ್ಕೆಯಾಗುವ ಸಾಧ್ಯತೆ ಇದೆ. ಇಂದು ನಾಮಪತ್ರ ಸಲ್ಲಿಕೆಯಾಗಲಿದೆ. ಅವರೊಬ್ಬರೇ ಬಿಜೆಪಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ತೊರೆದು ಬಂದ ಸಂದರ್ಭದಲ್ಲೇ ಬಿಜೆಪಿ ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಭರವಸೆ ನೀಡಿತ್ತು. ಹಂಗಾಮಿ ಸಭಾಪತಿಯಾಗಿರುವ ರಘುನಾಥರಾವ್ ಮಲ್ಕಾಪುರೆ ಅವರು ಸಹಾ ಸಭಾಪತಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಇದೀಗ ಬಿಜೆಪಿ ಕೊಟ್ಟ ಮಾತಿನಂತೆ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ದಯಪಾಲಿಸುವುದು ಬಹುತೇಕ ಖಚಿತವಾಗಿದೆ. ಈ ಹಿಂದೆ ಅವರು ಜೆಡಿಎಸ್-ಬಿಜೆಪಿ ಬೆಂಬಲದಿಂದ ಸಭಾಪತಿ ಆಗಿ ಕಾರ್ಯನಿರ್ವಹಿಸಿದ್ದರು.
Join The Telegram | Join The WhatsApp |