
ಉಡುಪಿ: ಹಿಂದೂ ನಾಯಕ ಸುಹಾಸ್ ಶೆಟ್ಟಿ ಭೀಕರ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬಂದು ಕರೆ ನೀಡಲಾಗಿದೆ. ಆದರೂ ಸಂಚಾರ ನಡೆಸಿದ ಬಸ್ ಗಳಿಗೆ ತಡೆ ಒಡ್ಡಲಾಗಿದೆ.
ಬೆಳಗ್ಗೆ 5.30ಕ್ಕೆ ಉಡುಪಿಯಿಂದ ಹೊರಟಿದ್ದ ಎರಡು ಬಸ್ ಗಳಿಗೆ ಮಂಗಳೂರಿನಲ್ಲಿ ಕಲ್ಲು ತೂರಾಟ ನಡೆಸಿರುವ ಹಿನ್ನೆಲೆ ಉಡುಪಿಯಿಂದ ಮಂಗಳೂರು ಕಡೆಗೆ ಸಂಚರಿಸುವ ಬಸ್ ಗಳನ್ನು ಸ್ಥಗಿತಗೂಳಿಸಲಾಗಿದೆ.
ಬಸ್ ಸಂಚಾರ ಸ್ಥಗಿತಗೊಂಡ ಪರಿಣಾಮ ಸಾರ್ವಜನಿಕರು ಉಡುಪಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿರುವ ದೃಶ್ಯ ಕಂಡು ಬಂದಿದೆ.
ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಬಸ್ ಓಡಿಸದಿರಲು ರಾಜ್ಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನಿರ್ಧರಿಸಿದ್ದಾರೆ.
ಉಡುಪಿಯಿಂದ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಗಳಿಗೂ ಕಲ್ಲು ತೂರಾಟವಾದ ಹಿನ್ನೆಲೆ ಕೆಎಸ್ಸಾರ್ಟಿಸಿ ಬಸ್ ಗಳು ಹೋಗಲೂ ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ಟಾರೆಯಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರ ಸೇರಿದಂತೆ ವಾಹನಗಳ ಹೋರಾಟ ತೀರಾ ಕಡಿಮೆ ಇದೆ.