ಅಹಮದಾಬಾದ್: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಮಂಗಳವಾರ) ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.

ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್‌ ಅಯ್ಯರ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.