ಗುವಾಹಟಿ: ಅಸ್ಸಾಂನ ಹೋಟೆಲ್, ರಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರುವುದು ಹಾಗೂ ಸೇವಿಸುವುದನ್ನು ನಿಷೇಧಿಸಿರುವುದಾಗಿ ಮುಖ್ಯ ಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ‘ಸಂಪುಟ ಸಭೆಯಲ್ಲಿ ರಾಜ್ಯದ ರೆಸ್ಟೋರೆಂಟ್, ಹೋಟೆಲ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮಾಡುವುದು ಹಾಗೂ ಸೇವಿಸುವುದನ್ನು ನಿಷೇಧಿಸಲು ನಿರ್ಧರಿಸಿದ್ದೇವೆ. ಈ ಮೊದಲು ದೇವಸ್ಥಾನಗಳ ಬಳಿ ಗೋಮಾಂಸ ಸೇವನೆ ನಿರ್ಬಂಧಿಸಲಾಗಿತ್ತು. ಈಗ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗಿದೆ’ ಎಂದು ತಿಳಿಸಿದರು.