Join The Telegram | Join The WhatsApp |
ಬೆಳಗಾವಿ :
ನಗರದ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಬುಧವಾರ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಭೆಯನ್ನು ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
1973 ರಲ್ಲಿ ಮಹಾವಿದ್ಯಾಲಯದಲ್ಲಿ ಅಧ್ಯಯನ ಮಾಡಿದ ಹಳೆಯ ವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿ ಮಹಾವಿದ್ಯಾಲಯದ ಜೊತೆಗಿನ ತಮ್ಮ ಬಾಂಧವ್ಯ ಮತ್ತು ವಿದ್ಯೆ ಕಲಿಸಿದ ಎಲ್ಲ ಗುರುಗಳನ್ನು ನೆನೆದು ಅವರ ಮಾರ್ಗದರ್ಶನ ಬದುಕಿಗೆ ದಾರಿ ತೋರಿದ ರೀತಿಯನ್ನು ವಿವರಿಸಿದರು. ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅವರ ಅನುಭವಗಳನ್ನು ಹಂಚಿಕೊಂಡರು. ಇಂದಿನ ನಮ್ಮ ವಿದ್ಯಾರ್ಥಿಗಳಿಗೆ ಮತ್ತು ಮಹಾವಿದ್ಯಾಲಯಕ್ಕೆ ತಮ್ಮಿಂದ ಸಾಧ್ಯವಾದ ಎಲ್ಲ ಸಹಾಯಗಳನ್ನು ಮಾಡಲು ಸ್ವಇಚ್ಛೆಯಿಂದ ಮುಂದೆ ಬಂದಿದ್ದಾರೆ.
ಪ್ರಾಚಾರ್ಯ ಡಾ.ಜೆ.ಎಸ್. ಕವಳೇಕರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಎಂ.ಎಸ್. ಬಾಗಿ ಸ್ವಾಗತಿಸಿದರು. ಅಲ್ಫಾಜ್ ಬಾಗವಾನ್ ವಂದಿಸಿದರು. ಮೇಘಾ ಗಲಗಲಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ವಿಭಾಗಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದರು.
Join The Telegram | Join The WhatsApp |