ಬೆಳಗಾವಿ :ಬೆಳಗಾವಿ ಜಿಲ್ಲೆಯಲ್ಲಿ ಬೆಳವಡಿ ಮಲ್ಲಮ್ಮ ಉತ್ಸವವನ್ನು ಫೆ.29 ರವರೆಗೆ ಆಚರಿಸಲಾಗುತ್ತಿದೆ. ಆದ್ದರಿಂದ ಮಾ.1 ಬೆಳಿಗ್ಗೆ 6 ಗಂಟೆಯವರೆಗೆ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಿ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ.

ಒಂದು ವೇಳೆ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಕ್ರಮವನ್ನು ಜರುಗಿಸಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ನಿತೇಶ್ ಪಾಟೀಲ ಆದೇಶದಲ್ಲಿ ತಿಳಿಸಿದ್ದಾರೆ.