ಬೆಳಗಾವಿ :
ಹುಬ್ಬಳ್ಳಿಯ ಜಿ.ಕೆ.ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಲಯ ಮಟ್ಟದ ಯೂಥ್ ಫೆಸ್ಟಿವಲ್ ನಲ್ಲಿ ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಮುಜಾಹಿದ್ ಖಾಜಿ ಮತ್ತು ಬಸವರಾಜ ಕಮತೆ (ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ), ಬಸವರಾಜ ಕಮತೆ(ಭಾಷಣ ಸ್ಪರ್ಧೆಯಲ್ಲಿ ಪ್ರಥಮ) ಗಿರಿರಾಜ ಸ್ವಾಮಿ ಹಿರೇಮಠ(ಗಾಯನ ಸ್ಪರ್ಧೆ) ಮತ್ತು ವಿನಾಯಕ ಸೊಂಟಕ್ಕಿ ವ್ಯಂಗ್ಯ ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯ ಡಾ.ಬಿ.ಜಯಸಿಂಹ, ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.