ಬೆಳಗಾವಿ :
ಬೆಳಗಾವಿ ದಂಡು ಮಂಡಳಿ ಸಿಇಒ ಕೆ.ಆನಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿಯ ಕ್ಯಾಂಪ್ ಪ್ರದೇಶದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಬೆಳಗಾವಿ ದಂಡು ಮಂಡಳಿಯಲ್ಲಿ ಒಂದುವರೆ ವರ್ಷಗಳಿಂದ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ ಕೆ.ಆನಂದ್ ಮೂಲತಃ ತಮಿಳುನಾಡಿನವರು. ಇಂದು ಅವರ ಮನೆ ಬಾಗಿಲು ತೆಗೆಯದೇ ಇದ್ದಾಗ ಸಿಬ್ಬಂದಿ ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಿದಾಗ ಆನಂದ್ ಶವವಾಗಿ ಪತ್ತೆಯಾಗಿದ್ದಾರೆ.

ದಂಡು ಮಂಡಳಿಯಲ್ಲಿ ಅಕ್ರಮ ನೇಮಕ ಸಂಬಂಧ ವಾರದ ಹಿಂದೆ ಸಿಬಿಐ ಅಧಿಕಾರಿಗಳು ದಂಡು ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದರ ಬೆನ್ನಿಗೆ ಇದೀಗ ಸಿಇಒ ಆನಂದ್ ಆತ್ಮಹತ್ಯೆ ಚರ್ಚೆಗೆ ಗ್ರಾಸವಾಗಿದೆ.