ಬೆಳಗಾವಿ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಬೆಳಗಾವಿ ಮೇಯರ್ ಸವಿತಾ ಕಾಂಬಳೆ ಅವರು ಇಂದು ಸರಕಾರಿ ವಾಹನ ಬಿಟ್ಟು ನಡೆದುಕೊಂಡೆ ಮನೆಗೆ ಹೋಗಿರುವ ಚಿತ್ರ ಈಗ ವೈರಲ್ ಆಗಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಅವರು ಮಹಾನಗರ ಪಾಲಿಕೆಗೆ ಸೇರಿರುವ ಕಾರನ್ನು ಬಿಟ್ಟು ಮನೆಗೆ ಕಾಲ್ನಡಿಗೆಯಲ್ಲೇ ತೆರಳಿರುವುದು ವಿಶೇಷವಾಗಿ ಎಲ್ಲರ ಗಮನ ಸೆಳೆಯಿತು.