ಬೆಳಗಾವಿ:
ಮಹಾನಗರ ಪಾಲಿಕೆಯ ಮೇಯರ್-ಉಪಮೇಯ‌ರ್ ಮೊದಲನೇ ಅವಧಿ ಸೋಮವಾರಕ್ಕೆ ಮುಕ್ತಾಯವಾಗಿದೆ. ಎರಡನೇ ಅವಧಿಗೆ ಮೇಯ‌ರ್ -ಉಪಮೇಯರ್ ಆಯ್ಕೆ ಪ್ರಕ್ರಿಯೆ ಫೆ. 15ರಂದು ನಡೆಯಲಿದೆ.

ಪಾಲಿಕೆ ಚುನಾವಣಾಧಿಕಾರಿ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಫೆ. 15ರಂದು ಬೆಳಗ್ಗೆ 9 ಗಂಟೆಯಿಂದ ನಾಮಪತ್ರ ಸ್ವೀಕಾರ ನಡೆಯಲಿದೆ. ಮಧ್ಯಾಹ್ನ 1 ಗಂಟೆ ನಂತರ ಮೇಯರ್-ಉಪಮೇಯರ್ ಆಯ್ಕೆ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಎರಡನೇ ಅವಧಿಗೆ ಮೇಯರ್ ಎಸ್‌ಸಿ ಮಹಿಳಾ ವರ್ಗ ಹಾಗೂ ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ವರ್ಗ ಮೀಸಲಿಡಲಾಗಿದೆ. ಮೊದಲನೇ ಅವಧಿಗೆ ಇದ್ದ ಮೇಯರ್ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ರೇಷ್ಮಾ ಪಾಟೀಲ ಅವರ ಅವಧಿ ಸೋಮವಾರಕ್ಕೆ ಮುಕ್ತಾಯಗೊಂಡಿದೆ.