ಬೆಳಗಾವಿ : ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಅವರನ್ನು ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಈ ಸಮಿತಿಯಲ್ಲಿ ಒಟ್ಟು 31 ಜನ ಸದಸ್ಯರಿದ್ದು, ಇದರಲ್ಲಿ 10 ಜನ ರಾಜ್ಯಸಭಾ ಸದಸ್ಯರು ಹಾಗೂ 21 ಜನ ಲೋಕಸಭಾ ಸದಸ್ಯರು ಇದ್ದಾರೆ. ರಾಧಾ ಮೋಹನ ಸಿಂಗ್ ಸಮಿತಿಯ ಅಧ್ಯಕ್ಷರಾಗಿದ್ದಾರೆ

ಈ ನೇಮಕಾತಿ ತಮಗೆ ಸಂತಸ ತಂದಿದೆ ಎಂದು ಜಗದೀಶ ಶೆಟ್ಟರ ತಿಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಸದೀಯ ವ್ಯವಹಾರ ಸಚಿವ ಕಿರಣ ರಿಜಿಜು ಅವರಿಗೆ ಧನ್ಯವಾದ ತಿಳಿಸಿದ್ದಾರೆ.