ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರನ್ನು 18 ನೇ ಲೋಕಸಭೆಯ ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿರುವುದಾಗಿ ಕೇಂದ್ರ ಸಂಸದೀಯ ವ್ಯವಹಾರ ಸಚಿವಾಲಯ ನವದೆಹಲಿ ದಿನಾಂಕ: 21-10-2024 ರಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸ್ಪೀಕರ್ ಓಂ ಬಿರ್ಲಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.