ಬೆಳಗಾವಿ : ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 300 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜೊತೆಗೆ ದಿನಾಂಕ 24.3.2024 ರ ಮಧ್ಯಾಹ್ನ 2 ಗಂಟೆಯಿಂದ 25.3.2024 ರ ರಾತ್ರಿ 11.59 ರವರೆಗೆ ಬೆಳಗಾವಿ ತಾಲೂಕಿನಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧದ ಬಗ್ಗೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಆದೇಶ ಹೊರಡಿಸಿರುತ್ತಾರೆ.