ಬೆಂಗಳೂರು : ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎ.ಐ.ಸಿ.ಸಿ ಅಧಿವೇಶನದ ಶತಮಾನೋತ್ಸವ (1924) ಆಚರಣೆ ಸಂಬಂಧ KPCC ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಈ ತಲೆಮಾರಿನ ಯುವ ಸಮೂಹಕ್ಕೆ ಮಹಾತ್ಮ ಗಾಂಧಿಯವರ ವಿಚಾರಗಳನ್ನು ಹೆಚ್ಚೆಚ್ಚು ತಲುಪಿಸಬೇಕು. ಪ್ರತೀ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೂ ಗಾಂಧಿಯ ವಿಚಾರಗಳು ಹೆಚ್ಚೆಚ್ಚು ಬೇರು ಬಿಡಬೇಕು. ಇದಕ್ಕೆ ತಕ್ಕಂತೆ ಇಡೀ ವರ್ಷ ಕಾರ್ಯಕ್ರಮಗಳನ್ನು ರೂಪಿಸುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಕೆ.ಪಾಟೀಲ್, ಕೆ.ಎಚ್.ಮುನಿಯಪ್ಪ, ಧುರೀಣ ಬಿ.ಎಲ್.ಶಂಕರ್ ಸೇರಿ ಹಲವು ಪ್ರಮುಖರು ಮತ್ತು ಶತಮಾನೋತ್ಸವ ಆಚರಣೆ ಸಮಿತಿಯ ಮುಖಂಡರುಗಳು ಉಪಸ್ಥಿತರಿದ್ದರು.