ಬೆಳಗಾವಿ : ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆಬ್ರವರಿ 24 ರಂದು ಮಹಾಂತೇಶ ನಗರದ ಮಹಾಂತ ಭವನದಲ್ಲಿ ಬೆಳಗಾವಿ ತಾಲೂಕು 9 ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ.

ನಗರಸೇವಕ ರಾಜಶೇಖರ ಡೋಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗಾವಿಯ ನಿವೃತ್ತ ಯೋಧ ಕ್ಯಾಪ್ಟನ್ ಬಾಳಗೌಡ ಪಾಟೀಲ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಪರಿಷತ್ತಿನ ಧ್ವಜಾರೋಹಣ ನೆರವೇರಿಸುವರು. ಕಸಾಪ ಬೆಳಗಾವಿ ತಾಲೂಕು ಅಧ್ಯಕ್ಷ ಸುರೇಶ ಹಂಜಿ ನಾಡ ಧ್ವಜಾರೋಹಣ ನೆರವೇರಿಸುವರು. ಬೆಳಗಾವಿ ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸುವರು. ಜ್ಯೋತಿ ಬದಾಮಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಆಸೀಫ್ (ರಾಜು) ಸೇಠ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಲಾ ಮೆಟಗುಡ್ಡ ಆಶಯ ನುಡಿಗಳನ್ನಾಡಲಿದ್ದಾರೆ. ಸುರೇಶ ಹಂಜಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಸಂಸದೆ ಮಂಗಳಾ ಅಂಗಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಶಾಸಕರಾದ ಅಭಯ ಪಾಟೀಲ, ಪ್ರಕಾಶ ಹುಕ್ಕೇರಿ, ಹಣಮಂತ ನಿರಾಣಿ, ಲಖನ್ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿರುವರು. ನಾಗೇಶ ಯಡಾಲ, ಆನಂದ ಬಣಗಾರ, ಶಶಿಕಾಂತ ನಾಯಕ, ಸಿದ್ಧರಾಯಿ ಬೋಸಗಿ, ರಾಜೇಶ ದಾನವಾಡಕರ, ವಿದ್ಯಾವತಿ ಭಜಂತ್ರಿ, ರೇವತಿ ಹೊಸಮಠ, ಮೋಹನ ಹಂಚಾಟೆ, ದಿನೇಶ ನಾಯಕ ಆಗಮಿಸಲಿದ್ದಾರೆ. ಕವಿಗೋಷ್ಠಿ, ಹಾಸ್ಯಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕ.ಸಾ.ಪ. ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕು ಅಧ್ಯಕ್ಷರು, ಹಾಗೂ ಜಿಲ್ಲಾ ಕ.ಸಾ.ಪ. ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು, ಕ.ಸಾ.ಪ. ಸರ್ವ ಸದಸ್ಯರು ಹಾಗೂ ಸಾಹಿತಿಗಳು, ಕಲಾವಿದರು ಮತ್ತು ಕನ್ನಡಪರ ಸಂಘಟನೆಗಳು, ಸಮಸ್ತ ಕನ್ನಡ ಮನಸ್ಸುಗಳು ಎಲ್ಲರೂ ಈ ಕನ್ನಡ ಕಾರ್ಯಕ್ರಮಕ್ಕೆ ಆಗಮಿಸಿ ಶೋಭೆ ತರಬೇಕೆಂದು ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಮತ್ತು ಸುರೇಶ ಹಂಜಿ ವಿನಂತಿಸಿದ್ದಾರೆ.