ಬೆಳಗಾವಿ :
ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಮತ್ತು ಬೆಳಗಾವಿಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ಬೆಳಗಾವಿ ವಲಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶದ ಸ್ಪರ್ಧೆ- 2023-24 ಫೆಬ್ರವರಿ 26 ರಂದು ನಗರದ ಲಿಂಗರಾಜ ಕಾಲೇಜು ಕೇಂದ್ರ ಸಭಾಗ್ರಹದಲ್ಲಿ ಏರ್ಪಡಿಸಲಾಗಿದೆ.

26 ರಂದು ಬೆಳಗ್ಗೆ 9:30 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ನಿರ್ದೇಶಕ ಕೆ.ದ್ವಾರಕನಾಥ ಬಾಬು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಸಂಶೋಧನಾ ನಿರ್ದೇಶಕ ಡಾ. ಸಿ. ಎಸ್. ಪಾಟೀಲ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು. ನ್ಯಾಯವಾದಿ ಮತ್ತು ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಆರ್‌.ಬಿ. ಬೆಲ್ಲದ ಅಧ್ಯಕ್ಷತೆ ವಹಿಸುವರು.

ಸಮಾರೋಪ ಸಮಾರಂಭ ಫೆಬ್ರವರಿ 26 ರಂದು ಸಂಜೆ 3-30 ಕ್ಕೆ ಲಿಂಗರಾಜ ಕಾಲೇಜಿನ ಕೇಂದ್ರ ಸಭಾಗ್ರಹದಲ್ಲಿ ನಡೆಯಲಿದೆ. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ನಿರ್ದೇಶಕ ಕೆ. ದ್ವಾರಕನಾಥ ಬಾಬು ಸಮಾರೋಪ ಭಾಷಣ ಮಾಡುವರು. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಸಂಶೋಧನಾ ನಿರ್ದೇಶಕ ಡಾ.ಸಿ.ಎಸ್. ಪಾಟೀಲ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಸಂಶೋಧನಾ ಮುಖ್ಯಸ್ಥ ಡಾ. ರೇವಯ್ಯ ಒಡೆಯರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು. ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜಯಸಿಂಹ ಅಧ್ಯಕ್ಷತೆ ವಹಿಸುವರು.