ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಚೆನ್ನೈಗೆ ಆಲ್​ರೌಂಡರ್​ ಗ್ಲೆನ್​ ಮ್ಯಾಕ್ಸ್​ವೆಲ್​ ಮೊದಲ ಎಸೆತದಲ್ಲೇ ಆಘಾತವಿಕ್ಕಿದರು. ನಾಯಕ ಋತುರಾಜ್​ ಗಾಯಕ್ವಾಡ್​​ ಅವರನ್ನು ಶೂನ್ಯಕ್ಕೆ ಔಟ್​ ಮಾಡಿದರು. ಈ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಚೆನ್ನೈ ಡೇಂಜಸರ್​ ಬ್ಯಾಟರ್​ ಡೇರಿಯಲ್​ ಮಿಚೆಲ್(4)​ ಅವರ ವಿಕೆಟ್​ ಕೂಡ ಕಳೆದುಕೊಂಡಿತು. ಆರ್​ಸಿಬಿ ಪಾಳಯದಲ್ಲಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿತು. ಆದರೆ ಈ ಸಂಭ್ರಮ ಹೆಚ್ಚು ಹೊತ್ತು ಸಾಗಲಿಲ್ಲ. ಮೂರನೇ ವಿಕೆಟ್​ಗೆ ರಹಾನೆ ಮತ್ತು ರಚಿನ್ ರವೀಂದ್ರ​ ಸೇರಿಕೊಂಡು ಉತ್ತಮ ಜತೆಯಾಟವೊಂದನ್ನು ಸಂಘಟಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ನಿಂದ ತಂಡಕ್ಕೆ 10 ಸರಾಸರಿಯಲ್ಲಿ ರನ್​ ಹರಿದುಬಂತು.

ಮೊದಲ ಕ್ವಾಲಿಫೈಯರ್ (ಮೇ 21) ಹಾಗೂ ಎಲಿಮಿನೇಟರ್ (ಮೇ 22) ಪಂದ್ಯಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡನೇ ಕ್ವಾಲಿಫೈಯರ್ (ಮೇ 24) ಹಾಗೂ ಫೈನಲ್ (ಮೇ 26) ಪಂದ್ಯಗಳು ಚೆನ್ನೈಯಲ್ಲಿ ನಿಗದಿಯಾಗಿದೆ.

ಪದೇ ಪದೇ ಉಲ್ಬಣಿಸುತ್ತಿರುವ ಗಾಯದ ಸಮಸ್ಯೆ ಹಾಗೂ ದೀರ್ಘ ಸಮಯದಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿರುವುದರಿಂದ ಮುಂದಿನ ಸಲ ಐಪಿಎಲ್‌ವರೆಗೂ ಫಿಟೈಸ್ ಕಾಯ್ದುಕೊಳ್ಳಲು ಧೋನಿಗೆ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ. ಹಾಗಾಗಿ ಐದು ಬಾರಿಯ ಚಾಂಪಿಯನ್ ಈ ಬಾರಿಯ ಐಪಿಎಲ್ ಬಳಿಕ ನಿವೃತ್ತಿ ಘೋಷಿಸಿದರೂ ಅಚ್ಚರಿಪಡಬೇಕಿಲ್ಲ.