ಶಿಗ್ಗಾವಿ :
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 64 ನೇ ಹುಟ್ಟುಹಬ್ಬದ ನಿಮಿತ್ತ ಶಿಗ್ಗಾವಿಯಲ್ಲಿ ಜರುಗಿದ ಸಮಾರಂಭದಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರಿಗೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಅವರಿಗೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ನಾಡು ನುಡಿ ಸೇವೆಯನ್ನು ಗೈದ ಸಾಧಕರಿಗೆ ಈ ಪ್ರಶಸ್ತಿಯನ್ನು ಕೊಡಮಾಡಲಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಸಚಿವ ಸಿ. ಸಿ. ಪಾಟೀಲ, ಹಾವೇರಿಯ ಶ್ರೀಗಳು ಮೊದಲಾದ ಗಣ್ಯರು ಉಪಸ್ಥಿತರಿದ್ದರು.