ಬೆಳಗಾವಿ : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳಿಗೆ ನೀಡಲಾಗುವ “ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವಿಪತ್ತು ನಿರ್ವಹಣಾ ಸಮಾಲೋಚಕರಾಗಿರುವ ನಿಂಗನಗೌಡ ಚನಬಸನಗೌಡರ ಅವರಿಗೆ ಲಭಿಸಿದೆ.

ಕಂದಾಯ ಇಲಾಖೆಯ ಸಚಿವ ಕೃಷ್ಣಭೈರೇಗೌಡ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ(ಸೆ.27) ಜರುಗಿದ ಸಮಾರಂಭದಲ್ಲಿ ನಿಂಗನಗೌಡ ಅವರಿಗೆ “ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ವಿ.ರಶ್ಮಿ ಸೇರಿದಂತ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.