ರಾಮನಗರ : ಬಿಡದಿ ಜೋಗರದೊಡ್ಡಿ ಗ್ರಾಮದ ತೋಟದ ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯನ ಬುರುಡೆಗಳು ಸೋಮವಾರ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ಬಲರಾಮ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮನುಷ್ಯನ ಬುರುಡೆಗಳನ್ನು ಸಂಗ್ರಹಿಸಿರುವ ಬಲರಾಮ್ ಮಾಟ–ಮಂತ್ರ ಮಾಡುವ ಜೊತೆಗೆ, ರಾತ್ರಿ ಸ್ಮಶಾನದಲ್ಲಿ ಬುರುಡೆ ಪೂಜೆ ಮಾಡುತ್ತಾನೆ ಎಂದು ಗ್ರಾಮಸ್ಥರು ಪೊಲೀಸರಿಗೆ ದೂರು ಕೊಟ್ಟಿದ್ದರು.
ಗ್ರಾಮಸ್ಥರ ದೂರಿನ ಮೇರೆಗೆ ತೋಟದ ಮನೆಗೆ ಭೇಟಿ ನೀಡಿದಾಗ, ಬುರುಡೆಗಳು ಹಾಗೂ ಮೂಳೆಗಳು ಪತ್ತೆಯಾಗಿವೆ. ಭದ್ರಕಾಳಿ ಫೋಟೊ, ಹೋಮಕುಂಡದ ಸುತ್ತ ಬುರುಡೆಗಳನ್ನು ಜೋಡಿಸಿ ಪೂಜೆ ಮಾಡಲಾಗಿದೆ. ಬಲರಾಮ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತ ಕೆಲ ವರ್ಷಗಳಿಂದ ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮನೆಗೆ ಭೇಟಿ ನೀಡಿದಾಗ ಕಂಡುಬಂದ ಬುರುಡೆಗಳು ಮತ್ತು ಮೂಳೆಗಳ ವಿಡಿಯೊ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿವೆ.