ಬೆಳ್ತಂಗಡಿ: ಬೈಕ್‌ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತರೊಬ್ಬರು ಮೃತಪಟ್ಟ ಘಟನೆ ಮಾ.31ರ ಸೋಮವಾರ ಮುಂಜಾನೆ 4 ಗಂಟೆಗೆ ಅಂಡಿಂಜೆಯಲ್ಲಿ ಸಂಭವಿಸಿದೆ.

ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ದಿ| ಅಣ್ಣಿ ಆಚಾರ್ಯ ಮತ್ತು ವಿನೋದ ಆಚಾರ್ಯ ದಂಪತಿ ಪುತ್ರ, ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40ವ) ಮೃತಪಟ್ಟವರು.

ಸತೀಶ್ ಆಚಾರ್ಯ ಅವರು ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮುಂಜಾನೆ 4 ಗಂಟೆಗೆ ತಮ್ಮ ಬೈಕ್‌ನಲ್ಲಿ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ನಡೆದಿದೆ. ಈ ಪರಿಣಾಮ ಅವರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯಗಳಾಗಿದೆ ಎನ್ನಲಾಗಿದೆ.

ಮೃತರು ತಾಯಿ, ಸಹೋದರಿ, ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.