ದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಲ್ವರು ಗಣ್ಯರಿಗೆ ಭಾರತ ರತ್ನ ಪ್ರದಾನ ಮಾಡಿದರು

ಮಾಜಿ ಪ್ರಧಾನಿಗಳಾದ ಚರಣ್ ಸಿಂಗ್, ನರಸಿಂಹರಾವ್, ಮಾಜಿ ಸಿಎಂ ಕರ್ಪೂರಿ ಠಾಕೂರ್, ಹಸಿರುಕ್ರಾಂತಿ ಹರಿಕಾರ ಎಂ.ಎಸ್. ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಎಲ್ ಕೆ ಅಡ್ವಾಣಿ ಅವರು ನಂತರ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಸಮಾಜವಾದಿ ಐಕಾನ್ ಚೌಧರಿ ಚರಣ್ ಸಿಂಗ್, ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಲಾಯಿತು — ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಲ್ಕು ಪುರಸ್ಕೃತರಿಗೆ ಭಾರತ ರತ್ನವನ್ನು ಪ್ರದಾನ ಮಾಡಿದರು.

ಐದನೇ ಪ್ರಶಸ್ತಿ ಪುರಸ್ಕೃತರಾದ ಎಲ್.ಕೆ.ಅಡ್ವಾಣಿ ಅನಾರೋಗ್ಯದ ಕಾರಣ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಮುರ್ಮು ಅವರು ಅಡ್ವಾಣಿ ಅವರಿಗೆ ನಾಳೆ ಅವರ ನಿವಾಸದಲ್ಲಿ ಪ್ರದಾನ ಮಾಡುವ ನಿರೀಕ್ಷೆಯಿದೆ.