ನವದೆಹಲಿ: 18ನೇ ಲೋಕಸಭೆಯ ಹಂಗಾಮಿ ಸ್ಪೀಕ‌ರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಕಾಂಗ್ರೆಸ್‌ನ ಹಿರಿಯ ಸದಸ್ಯ ಕೆ. ಸುರೇಶ್ ಅವರನ್ನು ಬಿಟ್ಟು ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ ಬಗ್ಗೆ ವಿರೋಧ ಪಕ್ಷಗಳು ಅಸಮಾಧಾನ ಹೊರಹಾಕಿದ್ದು, ಈ ವಿವಾದ ಅಧಿವೇಶನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ.

ಮೊದಲಿಗೆ ಲೋಕಸಭೆಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮಹತಾಬ್ ಅವರು ಕರೆ ನೀಡಿದರು. ಆ ನಂತರ ಎರಡು ದಿನಗಳವರೆಗೆ ಉಳಿದ ಸದಸ್ಯರ ಪ್ರಮಾಣವಚನ ಪ್ರಕ್ರಿಯೆ ನಡೆಯಲಿದೆ.