ಬೆಳಗಾವಿ: ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಗುರುವಾರ (ಜುಲೈ 25 ರಂದು) ಹಾಗೂ ಜುಲೈ 26 ರ (ಶುಕ್ರವಾರ)ಬೆಳಗಾವಿ ಜಿಲ್ಲೆಯ ಕೆಲ ತಾಲೂಕುಗಳ ಶಾಲಾ-PUC ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಪಶ್ಚಿಮ ಘಟ್ಟದ ಅಂಚಿನಲ್ಲಿರುವ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಜೆ ಘೋಷಣೆಯಾದ ತಾಲೂಕುಗಳು :

ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆ-ಕಾಲೇಜು(PUC)ಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌  ಆದೇಶ ಹೊರಡಿಸಿದ್ದಾರೆ.