ಉಡುಪಿ: ಚಂಡಮಾರುತ ಕಾರಣಕ್ಕೆ ಹವಾಮಾನ ಇಲಾಖೆಯ ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 3 ರಂದು (ಮಂಗಳವಾರ)ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.

ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.