ಬೆಂಗಳೂರು : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಘೋಷಣೆಯಾಗಿದೆ.

ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಘೋಷಣೆ ಮಾಡಿದರು.

ಇಡೀ ರಾಜ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಕಲಬುರ್ಗಿ ಜಿಲ್ಲೆ ರಾಜ್ಯದಲ್ಲೇ ಅತ್ಯಂತ ಕೊನೆಯ ಸ್ಥಾನ ಪಡೆದುಕೊಂಡಿದೆ. 625ಕ್ಕೆ 625 ಅಂಕಗಳನ್ನು ಒಟ್ಟು 22 ವಿದ್ಯಾರ್ಥಿಗಳು ಪಡೆದುಕೊಂಡಿರುವುದು ವಿಶೇಷವಾಗಿದೆ.

 

ಟಾಪ್‌ 5 ಜಿಲ್ಲೆಗಳ ಫಲಿತಾಂಶ

ದಕ್ಷಿಣ ಕನ್ನಡ- 91.12%

ಉಡುಪಿ- 89.96%

ಉತ್ತರ ಕನ್ನಡ – 83.19%

ಶಿವಮೊಗ್ಗ – 82.29%

ಕೊಡಗು – 82.21%

ಬೆಳಗಾವಿ ಶೈಕ್ಷಣಿಕ ಜಿಲ್ಲೆ 25ನೇ ಸ್ಥಾನ ಪಡೆದುಕೊಂಡರೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 26ನೇ ಸ್ಥಾನಕ್ಕೆ ಜಾರಿದೆ.