ಬೆಳಗಾವಿ : ವ್ಯಾಪಕ ಮಳೆ ಹಿನ್ನಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ರಿಂದ‌ ಜು.23 ರವರೆಗೆ ರಜೆ ಘೋಷಣೆ ಮಾಡಲಾಗಿದೆ.

ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 22 ರಿಂದ 23 ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.