ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸೋಮಶೇಖರ್​ ಅಡ್ಡ ಮತದಾನ

ಬೆಂಗಳೂರು :
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಾಜ್ಯಸಭೆ ಚುನಾವಣೆಗೆ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ. ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ.