ಬೆಳಗಾವಿ: ಬಿಜೆಪಿ ನಾಯಕ ಸಿ.ಟಿ. ರವಿ ಅವರು ದೀಪಾವಳಿ ನಂತರ ಕಾಂಗ್ರೆಸ್ ಸರಕಾರ ಪತನ ಆಗುತ್ತದೆ ಎಂಬ ಹೇಳಿಕೆಗೆ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ತಿರುಗೇಟು ನೀಡಿದ್ದಾರೆ.

ಬೆಳಗಾವಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಇನ್ನು ನಾಲ್ಕು ದೀಪಾವಳಿ ಕಾಯಬೇಕು. ಅಲ್ಲಿಯವರೆಗೆ ಮನೆಯಲ್ಲೇ ದೀಪಾವಳಿ ಮಾಡಲಿ. ಸಿದ್ದರಾಮಯ್ಯ ಅವರನ್ನು ಸಿಎಂ ಹುದ್ದೆಯಿಂದ ಇಳಿಸಲು ಯಾರಿಂದಲೂ ಸಾಧ್ಯವಿಲ್ಲ. ನ್ಯಾಯಾಲಯ ಒಂದು ವ್ಯವಸ್ಥೆ. ಅದು ನಡೆದುಕೊಂಡು ಹೋಗುತ್ತದೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎನ್ನುವುದು ನಮ್ಮೆಲ್ಲರ ಆಸೆ. ಆದ್ದರಿಂದ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಈ ಹಿಂದೆ ನಮ್ಮ ತಂದೆಯವರು ಮುಖ್ಯಮಂತ್ರಿ ಆಗಿದ್ದಾಗ ಸಾಕಷ್ಟು ಕೇಸ್ ಗಳನ್ನು ನೋಡಿದ್ದೇವೆ ಎಂದು ಹೇಳಿದರು.