ಉಡುಪಿ : ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

*ಪಕ್ಷಕ್ಕೆ ಬಲ*

ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.

 

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.