ಬೆಳಗಾವಿ : ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಹಾಗೂ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ ಬೆಳಗಾವಿ ನಗರದಲ್ಲಿ ಸರ್ಕಾರಿ ಬಸ್ ನಲ್ಲಿರುವ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡುವುದರ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ, ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಯುವರಾಜ ಜಾಧವ,ವಿಜಯ ಕೊಡಗನೂರ, ಪ್ರಶಾಂತ್ ಕಂಗ್ರಾಳಕರ್, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೋಲಕಾರ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ನಯನಾ ಭಸ್ಮೆ, ಮುರುಗೇಂದ್ರಗೌಡ ಪಾಟೀಲ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಉಮೇಶ್ ಪುರಿ, ಸುಭಾಷ್ ಸಣ್ಣವೀರಪ್ಪನವರ,ಆನಂದ ಅತ್ತುಗೋಳ,ಮನೋಜ್ ಪಾಟೀಲ್, ಧನ್ಯಕುಮಾರ ಪಾಟೀಲ್, ಪ್ರಸಾದ್ ದೇವರಮನಿ, ವಿಠ್ಠಲ ಸಾಯಣ್ಣವರ, ವೀರಭದ್ರ ಪೂಜಾರಿ ಹಾಗೂ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.