ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಭಾವಿ ನಾಯಕರನ್ನು ಬಿಜೆಪಿಗೆ ಕರೆತರಲು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸಿದ್ಧತೆ ನಡೆಸಿದ್ದಾರೆ.

ಸದ್ಯದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ
ಹಾವೇರಿ ಲೋಕಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬೊಮ್ಮಾಯಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂಬಂತಿದೆ. ಶನಿವಾರ ಮಾಜಿ ಸಚಿವ ಮನೋಹರ ತಹಸೀಲ್ದಾರ ಅವರನ್ನು ಬಿಜೆಪಿಗೆ ಕರೆತಂದಿದ್ದರು. ಇದೀಗ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿ ಜೆಡಿಎಸ್ ನಿಂದ ತಮ್ಮ ವಿರುದ್ಧವೇ ಸ್ಪರ್ಧಿಸಿದ್ದ ಶಶಿಧರ ಯಲಿಗಾರ ಅವರನ್ನು ಬಿಜೆಪಿಗೆ ಕರೆ ತರಲು ಬೊಮ್ಮಾಯಿ ತೆರೆಮರೆಯಲಿ ಮಾತುಕತೆ ನಡೆಸಿ ಸಿದ್ಧತೆ ನಡೆಸಿದ್ದಾರೆ. ಒಟ್ಟಾರೆ ಬಸವರಾಜ ಬೊಮ್ಮಾಯಿ ಇದೀಗ ಪ್ರಭಾವಿಗಳನ್ನು ಬಿಜೆಪಿಗೆ ಸೆಳೆಯಲು ಪ್ರಯತ್ನ ನಡೆಸಿರುವುದು ಕಂಡುಬಂದಿದೆ.