ಬೆಳಗಾವಿ :
ನೂತನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಮಹಾನಗರ ಬೆಳಗಾವಿ ವತಿಯಿಂದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ನಂತರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆ ಹಿಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಮಹಾನಗರ ಅಧ್ಯಕ್ಷ ಮಹಾದೇವ ಧರೆನ್ನವರ್, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ ಮಾತನಾಡಿ ಕೂಡಲೇ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳನ್ನು ಬಂಧಿಸಬೇಕು ನಾಸಿರ ಹುಸೇನ್ ಅವರನ್ನು ರಾಜ್ಯಸಭೆ ಸದಸ್ಯತ್ವದಿಂದ ರದ್ದು ಪಡಿಸಬೇಕು ಎಂದರು.
ಡಾ ರವಿ. ಪಾಟೀಲ,ಉಜ್ವಲಾ ಬಡವನಾಚೆ,ರಮೇಶ ದೇಶಪಾಂಡೆ, ಮಹಾಂತೇಶ ಲಕ್ಕುಂಡಿ ಹಾಗೂ ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ಮಹಾನಗರ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.