ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗುಜರಾತ್‌ನ ಗಾಂಧಿನಗರ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಲಖನೌ, ಸ್ಮೃತಿ ಇರಾನಿ ಅವರು ಅಮೇಥಿಯಿಂದ, ಕಿರಣ್‌ ರಿಜಿಜು ಅರುಣಾಚಲ ಪಶ್ಚಿಮ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ, ಕೇರಳದ ಪಥಣಂತಿಟ್ಟದಿಂದ ಎ.ಕೆ. ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ, ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿರುವನಂತಪುರಂನಿಂದ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣಕ್ಕಿಳಿದಿದ್ದಾರೆ.ಉತ್ತರ ಪ್ರದೇಶದ ಮಥುರಾದಿಂದ ಹೇಮಾಮಾಲಿನಿ, ಉನ್ನಾವೋದಿಂದ ಸಾಕ್ಷಿ ಮಹಾರಾಜ್‌, ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜೀವ್‌ ಕುಮಾರ್‌, ಸಿಕಂದರಾಬಾದ್‌ ಜಿ. ಕಿಶನ್‌ ರೆಡ್ಡಿ ಅವರಿಗೂ ಬಿಜೆಪಿ ಸಿಕ್ಕಿದೆ. ಬಿಜೆಪಿಯು ಈ ಬಾರಿ ಹಲವು ಬದಲಾವಣೆ ಮಾಡಿದೆ. ನವದೆಹಲಿ ಕ್ಷೇತ್ರದ ಸಂಸದೆ, ಸಚಿವೆಯೂ ಆಗಿರುವ ಮೀನಾಕ್ಷಿ ಲೇಖಿ ಅವರನ್ನು ಕೈಬಿಡಲಾಗಿದೆ. ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್‌ ಪುತ್ರಿ ಬನ್ಸೂರಿ ಸ್ವರಾಜ್‌ ಅವರಿಗೆ ಸ್ಪರ್ಧಿಸಲಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರನ್ನು ಕೈಬಿಡಲಾಗಿದ್ದು, ಅಲೋಕ್‌ ಶರ್ಮಾ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ವಿದಿಶಾದಿಂದ ಟಿಕೆಟ್‌ ನೀಡಲಾಗಿದೆ. ದೆಹಲಿ ಉತ್ತರ ಮನೋಜ್‌ ತಿವಾರಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ್‌ ನಾಯಕ್‌ ಅವರು ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಇದೀಗ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರತಿಷ್ಠಿತ ನಾಯಕರನ್ನು ಬಿಜೆಪಿ ಕಣಕ್ಕಿಳಿಸಿದೆ. ಈ ಸಲದ ಚುನಾವಣೆಯಲ್ಲಿ 400 ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಯಕೆಯಲ್ಲಿರುವ ಬಿಜೆಪಿ ಇದೀಗ ಚುನಾವಣೆ ಘೋಷಣೆಗೂ ಮುನ್ನ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ.

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕಸರತ್ತು ನಡೆಸುತ್ತಿದ್ದ ಬಿಜೆಪಿಯು ಕೊನೆಗೂ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ನಾಯಕ ವಿನೋದ್‌ ತಾವ್ಡೆ ಸೇರಿ ಹಲವು ನಾಯಕರು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. 195 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿದರು. ಪಟ್ಟಿಯಲ್ಲಿ ಕರ್ನಾಟಕದ ಯಾವ ಕ್ಷೇತ್ರಕ್ಕೂ ಟಿಕೆಟ್‌ ಘೋಷಿಸಿಲ್ಲ ಎಂಬುದು ಗಮನಾರ್ಹವಾಗಿದೆ.

16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಯುವಕರು, ಸುಲಭವಾಗಿ ಗೆಲ್ಲುವ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್‌ 15, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್‌ 11, ಛತ್ತೀಸ್‌ಗಢ 11, ದೆಹಲಿ 5, ಜಮ್ಮು-ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರ 1, ಅಂಡಮಾನ್‌ ನಿಕೋಬಾರ್‌ 1 ಹಾಗೂ ದಿಯು ಮತ್ತು ದಮನ್‌ನ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ಭೂ ವಿಜ್ಞಾನಗಳ ಖಾತೆ ಸಚಿವ ಕಿರಣ್‌ ರಿಜಿಜು, ಸರ್ಬಾನಂದ ಸೋನೋವಾಲ್‌ ಸೇರಿ ಹಲವರು ಟಿಕೆಟ್‌ ಪಡೆದ ಗಣ್ಯರಾಗಿದ್ದಾರೆ. ದೆಹಲಿಯ ಚಾಂದಿನಿ ಚೌಕ್‌ನಿಂದ ಪ್ರವೀಣ್‌ ಕಂಡೇಲ್‌ವಾಲ್‌, ದೆಹಲಿ ಉತ್ತರ ಮನೋಜ್‌ ತಿವಾರಿ ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ ನಾಯಕ್‌, ಗಾಂಧಿನಗರದಿಂದ ಅಮಿತ್‌ ಶಾ, ಅಹ್ಮದಾಬಾದ್‌ ಪಶ್ಚಿಮ ಕ್ಷೇತ್ರದಿಂದ ದಿನೇಶ್‌ಭಾಯಿ ಮಕ್ವಾನ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ ಅವರಿಗೆ ಟಿಕೆಟ್‌ ನೀಡಲಾಗಿದೆ.

ಕಾಸರಗೋಡು ಕ್ಷೇತ್ರದಿಂದ ಎಂ.ಎಲ್.ಅಶ್ವಿನಿ, ಕೇರಳದಲ್ಲಿ ಎ.ಕೆ. ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ, ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿರುವನಂತಪುರಂನಿಂದ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣಕ್ಕಿಳಿದಿದ್ದಾರೆ. ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜೀವ್‌ ಕುಮಾರ್‌, ಸಿಕಂದರಾಬಾದ್‌ ಜಿ. ಕಿಶನ್‌ ರೆಡ್ಡಿ, ಹೈದರಾಬಾದ್‌ ಮಾಧವಿ ಲತಾ ಸ್ಪರ್ಧಿಸುತ್ತಿದ್ದಾರೆ.