ಬೆಳಗಾವಿ : ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲೇ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ. ಜಪ್ತಿ ಮಾಡಿ ನಿಲ್ಲಿಸಿದ್ದ ವಾಹನದ ಹಿಂಬದಿ ಸೀಟಿನಲ್ಲಿ ಸುಮಾರು 40 ರಿಂದ 45 ವರ್ಷದ ವ್ಯಕ್ತಿಯ ಕೊಳೆತ ಶವ ಪತ್ತೆಯಾಗಿದೆ. ಸುಮಾರು 15 ದಿನಗಳ ಹಿಂದೆ ವ್ಯಕ್ತಿ ಮೃತಪಟ್ಟಿರುವ ಶಂಕೆ ಇದ್ದು ಶವವನ್ನು ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.