ತುಮಕೂರು: ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್​ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಅಪಘಾತ ಸಂಭವಿಸಿದೆ. ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ, ಹಿಂಬದಿಯಿಂದ ಬೊಲೆರೋ ಪಿಕಪ್​ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನು ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಎಂದು ಗುರುತಿಸಲಾಗಿದೆ. ಇಬ್ಬರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎಂದು ತಿಳಿದುಬಂದಿದೆ. ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ನಡೆದ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಚಾಲಕನಿಗೆ ಗಾಯವಾಗಿದೆ. ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.