ವ್ಯಾಪಕ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9ರಂದು (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಿಂದ PUC ಕಾಲೇಜುಗಳವರೆಗೆ ಮಂಗಳವಾರ ರಜೆ ಘೋಷಣೆ
ಮಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9ರಂದು (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ಹವಾಮಾನ ಇಲಾಖೆ ರೆಡ್ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜುಲೈ ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಆದರೆ ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.