ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿ ಕೊನೆಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ ಈ ಮೂಲಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾದಂತಾಗಿದೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇಂದು ಸಂಜೆ 7:30ಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಪ್ರಕಟಿಸಿದರು.

ಸಚಿವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಡ ಹೇರಿದ್ದವು. ಜೊತೆಗೆ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ರಾಜೀನಾಮೆ ನೀಡಲು ಸೂಚನೆ ರವಾನಿಸಿದ್ದ ಹಿನ್ನೆಲೆಯಲ್ಲಿ ಸಚಿವರು ಕೊನೆಗೂ ತಮ್ಮ ರಾಜೀನಾಮೆ ನೀಡಿದ್ದಾರೆ.