ಬೆಂಗಳೂರು: ಖ್ಯಾತ ನಟ ದರ್ಶನ್ ಅವರ ಪ್ರೇಯಸಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ದರ್ಶನ್ ಆಪ್ತರು ಕೊಲೆ ಮಾಡಿ ಎಸೆದಿದ್ದರು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ದರ್ಶನ್ ಮತ್ತು ಅವರ ಪ್ರೇಯಸಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರೇಣುಕಾ ಪತ್ನಿ ಗರ್ಭಿಣಿ :
ಚಿತ್ರದುರ್ಗದ ರೇಣುಕಾ ಸ್ವಾಮಿ ಅಪೋಲೋ ಫಾರ್ಮಸಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದು ಅವರ ಪತ್ನಿ ಸಹನಾ ಇದೀಗ ಮೂರು ತಿಂಗಳ ಗರ್ಭಿಣಿಯಾಗಿದ್ದಾರೆ.