ದೆಹಲಿ : ನವದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ಮೂರು ಹಂತಗಳಲ್ಲಿ ನಡೆಯಲಿದ್ದು, ಸೆ.18, ಸೆ.25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಏತನ್ಮಧ್ಯೆ ಹರಿಯಾಣದಲ್ಲಿ ಅಕ್ಟೋಬರ್ 1 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಮತ ಎಣಿಕೆ ನಡೆಯಲಿದೆ.